ಯುವತಿಯೊಂದಿಗೆ ರೈಲಿನಲ್ಲಿ ಅಸಭ್ಯ ವರ್ತನೆ; ಆರೋಪಿಯ ಬಂಧನ

Update: 2023-08-02 06:53 GMT

ಕಾಸರಗೋಡು : ಯುವತಿಯೊಂದಿಗೆ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕಣ್ಣೂರು ಪರಪ್ಪನಂಗಡಿ ನಿವಾಸಿ ಜೋರ್ಜ್ ಜೋಸೆಫ್ (51) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಕೊಯಮುತ್ತೂರು - ಮಂಗಳೂರು ಇಂಟರ್ ಸಿಟಿ ರೈಲಿ ನಲ್ಲಿ ಈ ಘಟನೆ ನಡೆದಿದ್ದು, ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ.

ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ ಫೋಟೋಗಳು ಪೊಲೀಸರಿಗೆ ಲಭಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News