ಕಾಸರಗೋಡು| ಬಸ್‌ ಪಲ್ಟಿ: ಚಾಲಕ ಮೃತ್ಯು

Update: 2024-03-18 14:09 GMT

ಕಾಸರಗೋಡು: ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.

ಚಾಲಕ ಚೇತನ್ ಕುಮಾರ್ (37) ಮೃತಪಟ್ಟವರು.

ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಈ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಟೋಲ್ ಬೂತ್ ನಿರ್ಮಿಸಲು ಚಾಲಿಂಗಾಲ್ ನಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿದ್ದು, ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಬಸ್ಸಿನಡಿಯಲ್ಲಿ ಸಿಲುಕಿದವರನ್ನು ಪರಿಸರವಾಸಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.





Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News