ಕಾಸರಗೋಡು: ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಐದೂವರೆ ಕಿಲೋ ಗಾಂಜಾ ವಶಕ್ಕೆ
Update: 2024-05-27 12:56 GMT
ಕಾಸರಗೋಡು: ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಐದೂವರೆ ಕಿಲೋ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಮಂಜೇಶ್ವರದಿಂದ ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಅಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಸೋಮವಾರ ಬೆಳಗ್ಗೆ ಮಂಜೇಶ್ವರದ ಹೊಸಂಗಡಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ ಎಸ್ ಆರ್ ಟಿ ಸಿ ಬಸ್ ನ್ನು ತಪಾಸಣೆ ನಡೆಸಿ ದಾಗ ಬ್ಯಾಗ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆಯಾಗಿದೆ.
ಈ ನಡುವೆ ಬ್ಯಾಗ್ ನ ವಾರಸುದಾರನೆನ್ನಲಾದ ವ್ಯಕ್ತಿಯೋರ್ವ ತಪಾಸಣೆ ವೇಳೆ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.