ಮೇ 10, 11ರಂದು ಮಡಿಕೇರಿಯಲ್ಲಿ 'ಬಂಟೆರೆನ ವಾರ್ಷಿಕ ಸಮ್ಮಿಲನ-2025'

Update: 2025-04-04 16:06 IST
ಮೇ 10, 11ರಂದು ಮಡಿಕೇರಿಯಲ್ಲಿ ಬಂಟೆರೆನ ವಾರ್ಷಿಕ ಸಮ್ಮಿಲನ-2025
  • whatsapp icon

ಮಡಿಕೇರಿ ಎ.4: ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಮೇ 10 ಮತ್ತು 11ರಂದು ಮಡಿಕೇರಿಯಲ್ಲಿ 'ಬಂಟೆರೆನ ವಾರ್ಷಿಕ ಸಮ್ಮಿಲನ-2025' ನಡೆಯಲಿದ್ದು, ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ (ಮ್ಯಾನ್ ಕಾಂಪೌಂಡ್) ನಲ್ಲಿ ಬೆಳಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮದ ಹಾಗೂ ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ದೊರೆಯಲಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಪುರುಷರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು, ಕ್ರಿಕೆಟ್ ಮತ್ತು ವಾಲಿಬಾಲ್ ತಂಡಗಳು ಎ.20ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ನಿಂಬೆ ಚಮಚ ಹಾಗೂ ಇತರೆ ಆಕರ್ಷಕ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಮಕ್ಕಳಿಗೆ 100 ಮೀ. ಓಟ ಹಾಗೂ ಮನೋರಂಜನಾ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.

ಇದೇ ಸಂದರ್ಭ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದ್ದು, ಕೊಡಗಿನ ಎಲ್ಲಾ ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ನಿಖಿಲ್ ಆಳ್ವ 9972477982, ಸುಜಿತ್ ಶೆಟ್ಟಿ 9663721707 ಸಂಪರ್ಕಿಸಬಹುದಾಗಿದೆ ಎಂದು ಶರತ್ ಕುಮಾರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News