ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ

Update: 2023-08-22 07:53 GMT

ಬಂಧಿತ ಆರೋಪಿ ಸಿಜಿಲ್

ಮಡಿಕೇರಿ ಆ.22 :ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ನೆಲ್ಲಿಹುದಿಕೇರಿ ನಿವಾಸಿ ಆಟೋ ಚಾಲಕ ಸಿಜಿಲ್(25) ಎಂದು ಗುರುತಿಸಲಾಗಿದೆ. ಈತ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಕಾಲೇಜ್ ನ ಹಾಸ್ಟೆಲ್ ನಲ್ಲಿ ಭದ್ರತೆ ಲೋಪದ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿ ತಮ್ಮ ನೋವು ತೋಡಿಕೊಂಡಿದ್ದರು. ಕಾಲೇಜ್ ಗೆ ಸೂಕ್ತ ಭದ್ರತೆಯ ಗೇಟ್ ಇಲ್ಲದ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮ ರಾಜನ್ ಮಾರ್ಗದರ್ಶನದಲ್ಲಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ.  

ಆಟೋ, ಬೈಕ್ ಮತ್ತಿತರ ವಾಹನಗಳಲ್ಲಿ  ಬರುವ ಯುವಕರು, ಹಾಸ್ಟೆಲ್ ಹುಡುಗಿಯರ ಎದುರು ಅಸಭ್ಯ ವರ್ತನೆ ಮಾಡಿದ್ದಲ್ಲದೇ ಈ ಬಗ್ಗೆ ಪ್ರಶ್ನಿಸಲು ಹೋದರೆ ಕಾಲೇಜು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಘಟನೆಯ  ಆರೋಪಿಗಳಾದ ಮೂಲತಃ ಮಡಿಕೇರಿಯ ಮನು ಸಿ(27) ಪ್ರಶಾಂತ್ ಎಸ್(27) ಕಿರಣ್ (28) ಎಂಬವರ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News