ಪ್ರವಾಹ ಪೀಡಿತ ಪ್ರದೇಶಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಭೇಟಿ; ಶೀಘ್ರ ನಿವೇಶನ ನೀಡುವುದಾಗಿ ಭರವಸೆ

Update: 2024-07-20 15:40 GMT

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಮನೆ ಕಳೆದುಕೊಂಡವರಿಗೆ ನಿವೇಶನ ಮಂಜೂರು ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಸಚಿವರು ಸಂತ್ರಸ್ತರ ಅಹವಾಲು ಆಲಿಸಿದರು.

ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು. ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುತ್ತೀರ ಎಂದು ಕೇಳಿದರು. ಇದಕ್ಕೆ ಪ್ರಕ್ರಿಯಿಸಿದ ಸಂತ್ರಸ್ತರು ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮನೋರಂಜನೆಗಾಗಿ ಟಿ.ವಿ., ಆರೋಗ್ಯ ಸೇವೆ ಇತರೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಅವರು ಮಾತನಾಡಿ ಸಂತ್ರಸ್ತರಿಗೆ ವಸತಿ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಅವರು ಗೋಣಿಕೊಪ್ಪಲು ಕೀರೆಹೊಳೆ, ಬಾಳೆಲೆ, ಹುದಿಕೇರಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.

ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.

ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು. 

ಸುರಕ್ಷಿತ ಸ್ಥಳಗಳಿಗೆ ತೆರಳಲು ನಗರಸಭೆ ಸೂಚನೆ

ಮಳೆಯ ತೀವ್ರತೆ ಹೆಚ್ಚಾಗಿದ್ದು, ಅಪಾಯದಂಚಿನ ಸ್ಥಳಗಳಲ್ಲಿ ವಾಸಿಸುತ್ತಿರುವವರಿಗೆ ಈಗಾಗಲೇ ನಗರಸಭೆಯಿಂದ ನೋಟೀಸ್ ನೀಡಲಾಗಿದೆ. ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ತಿಳಿಸಿದ್ದರೂ ನಿವಾಸಿಗಳು ತೆರಳದಿದ್ದರೆ ಮುಂದೆ ಸಂಭವಿಸಬಹುದಾದ ಅನಾಹುತಗಳಿಗೆ ನಗರಸಭೆ ಜವಾಬ್ದಾರಿಯಲ್ಲವೆಂದು ನಗರಸಭಾ ಆಯುಕ್ತ ವಿಜಯ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಇನ್ನೂ ಹೆಚ್ಚಿಗೆ ಇರುವುದಾಗಿ ಹವಾಮಾನ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದ್ದು, ಸುರಕ್ಷಿತವಲ್ಲದ ಪ್ರದೇಶ, ತಗ್ಗು ಪ್ರದೇಶ, ಮರಗಳ ಹತ್ತಿರ ವಾಸವಿರುವವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಲಾಗಿದೆ. ಇದನ್ನು ಮೀರಿ ಅಲ್ಲೇ ವಾಸವಿದ್ದು, ಯಾವುದೇ ರೀತಿಯ ಅನಾಹುತ, ಅವಘಡ ಸಂಭವಿಸಿದಲ್ಲಿ, ಮುಂದಿನ ಆಗುಹೋಗುಗಳಿಗೆ ನಗರಸಭೆ ಜವಾಬ್ದಾರಿಯಲ್ಲ. ಹೆಚ್ಚಿನ ಮಾಹಿತಿಗೆ ನಗರಸಭೆ ಸಹಾಯವಾಣಿ ದೂರವಾಣಿ ಸಂಖ್ಯೆ 08272-220111 ನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

ಸ್ಪಂದಿಸುವ ಸಿಬ್ಬಂದಿಗಳ ವಿವರ

ಬಡಾವಣೆಯ ಹೆಸರು ಮತ್ತು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಂತಿದೆ. ಚಾಮುಂಡೇಶ್ವರಿ ನಗರ, ಜ್ಯೋತಿನಗರ, ರಾಜಾಸೀಟ್ ಬಳಿ, ವ್ಯಾಲಿವ್ಯೂ ಹತ್ತಿರ ವೈ.ಇ.ಸೋಮಶೇಖರ್ ದೂ.ಸಂ. 9449402270, ಇಂದಿರಾನಗರ, ಮಂಗಳೂರು ರಸ್ತೆ ಕೆ.ವಿ.ಚಂದ್ರಶೇಖರ್ ದೂ.ಸಂ. 9945273682, ಮಂಗಳದೇವಿನಗರ, ಮೂರ್ನಾಡು ರಸ್ತೆ, ಜಿ.ಟಿ ರಸ್ತೆ, ಜಯನಗರ ಸುದರ್ಶನ ಬಳಿ, ಅಶೋಕಪುರ, ಸಿದ್ದಾಪುರ ರಸ್ತೆ ಶಶಿಕುಮಾರ್ ಹೆಚ್.ಕೆ. ದೂ.ಸಂ.8277029359.

ಚೈನ್‍ಗೇಟ್, ಜಲಾಶ್ರಯ ಬಡಾವಣೆ, ರಾಘವೇಂದ್ರ ದೇವಸ್ಥಾನ, ದೇಚೂರು, ಬಾಣೆಮೂಟ್ಟೆ, ಕನ್ನಂಡಬಾಣೆ, ಪುಟಾಣಿನಗರ, ಜ್ಯೋತಿಮಿಲ್ ಹತ್ತಿರ, ಓಂಕಾರೇಶ್ವರ ದೇವಸ್ಥಾನ ಹತ್ತಿರ, ಗುಂಡೂರಾವ್ ಬಡಾವಣೆ, ಗೌಡಸಮಾಜ ಹತ್ತಿರ, ಮ್ಯಾನ್ಸ್ ಕಾಂಪೌಂಡ್ ಬಳಿ ಸುರೇಶ್ ಪಿ.ಬಿ ದೂ.ಸಂ. 9480499601, ಡೈರಿಫಾರಂ, ಭಗವತಿನಗರ, ಐ.ಟಿ.ಐ. ಸುತ್ತಮುತ್ತ, ಡಿ.ಎ.ಆರ್. ಕ್ವಾಟ್ರಸ್ ಬಳಿ, ಎಫ್.ಎಂ.ಸಿ. ಕಾಲೇಜು ಸುತ್ತಮುತ್ತ, ವಿದ್ಯಾನಗರ, ಸುಬ್ರಮಣ್ಯ ನಗರ, ರೈಫಲ್ ರೇಂಜ್, ಕಾನ್ವೆಂಟ್, ಕಾವೇರಿ ಲೇಔಟ್ ಸತ್ಯನಾರಾಯಣ ಕೆ. ದೂ.ಸಂ. 9449682750,

ಹೊಸಬಡಾವಣೆ, ಕೊಹಿನೂರು ರಸ್ತೆ, ರೇಸ್‍ಕೋರ್ಸ್ ರಸ್ತೆ, ಪೆನ್‍ಷನ್ ಲೇನ್, ಗೌಳಿಬೀದಿ, ಕೈಗಾರಿಕಾ ಬಡಾವಣೆ, ವೆಬ್ಸ್ ಬಳಿ, ಹಳೆ ಪೊಲೀಸ್ ವಸತಿ ಗೃಹ ಬಳಿ, ಹಾಕಿ ಸ್ಟೇಡಿಯಂ ಸುತ್ತಮುತ್ತ ಎಚ್.ಕೆ.ಅರುಣ್‍ಕುಮಾರ್ ದೂ.ಸಂ. 7259893975 ಹಾಗೂ ಮಲ್ಲಿಕಾರ್ಜುನನಗರ, ರಾಣಿಪೇಟೆ, ಮಹದೇವಪೇಟೆ, ಗಣಪತಿಬೀದಿ, ಕನಕದಾಸ ರಸ್ತೆ, ಹಿಲ್ ರಸ್ತೆ, ದಾಸವಾಳ ರಸ್ತೆ, ಮುತ್ತಪ್ಪ ದೇವಸ್ಥಾನ ಹತ್ತಿರ, ತ್ಯಾಗರಾಜ ಕಾಲೋನಿ, ಗದ್ದಿಗೆ, ಆಜಾದ್‍ನಗರ, ರಾಜರಾಜೇಶ್ವರಿನಗರ, ಉಕ್ಕುಡ, ಸಂಪಿಗೆ ಕಟ್ಟೆ ಇಲ್ಲಿಗೆ ಎಂ.ಎ. ಬಶೀರ್ ಅಹಮ್ಮದ್ ದೂ.ಸಂ.7338548313 ನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

 

 

 

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News