ಕೊಡಗು: ರಸ್ತೆ ಬದಿಯಲ್ಲಿ ಯುವಕನ ಮೃತದೇಹ ಪತ್ತೆ

Update: 2023-08-11 10:04 GMT

ಸಿದ್ದಾಪುರ (ಕೊಡಗು): ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ - ಪಾಲಿಬೆಟ್ಟ ರಸ್ತೆಯ ಬದಿಯಲ್ಲಿ ಶುಕ್ರವಾರ ಬೆಳಿಗ್ಗೆ ಯುವಕನ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಸಿದ್ದಾಪುರದ ಅಂಬೇಡ್ಕರ್ ನಗರ ನಿವಾಸಿ ಕ್ರಿಸ್ಟಲ್ ಎಂದು ಗುರುತಿಸಲಾಗಿದೆ.

ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮೃತ ಯುವಕನ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪಿಎಸ್ಐ ರಾಘವೇಂದ್ರ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News