ಕೊಡಗು: ದೇವಾಲಯಗಳಲ್ಲಿ ಕಳ್ಳತನ; ಅಂತರ್ ಜಿಲ್ಲಾ ಆರೋಪಿಯ ಬಂಧನ

Update: 2024-11-19 08:57 GMT

ಮುಬಾರಕ್

ಮಡಿಕೇರಿ ನ.19 : ಕೊಡಗು ಜಿಲ್ಲೆಯ ವಿವಿಧ ದೇವಾಯಗಳಲ್ಲಿ ಕಳ್ಳತನ ಮಾಡಿದ ಆರೋಪದಡಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಎಂದು ಗುರುತಿಸಲಾಗಿದೆ.

ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನ, ಶನಿವಾರಸಂತೆ ಪಟ್ಟಣದ ಪೇಟೆ ರಾಮ ಮಂದಿರ ದೇವಸ್ಥಾನ ಮತ್ತು ತ್ಯಾಗರಾಜ ಕಾಲೋನಿಯ ವಿಜಯ ವಿನಾಯಕ ದೇವಸ್ಥಾನಗಳ  ಹುಂಡಿಯ ಹಣವನ್ನು ಕಳ್ಳತನ ಮಾಡಿದ ಆರೋಪ ಈತನ ಮೇಲಿದೆ. ಈತನ ವಿರುದ್ಧ  ಶನಿವಾರವಾರಸಂತೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿವಿಧ ದೇವಸ್ಥಾನಗಳ ಹುಂಡಿಯ ಹಣವನ್ನು ಕಳವು ಮಾಡಿದ ಪ್ರಕರಣ ದಾಖಲಾಗಿತ್ತು.

ಡಿವೈಎಸ್‍ಪಿ ಗಂಗಾಧರಪ್ಪ ಆರ್.ವಿ, ಶನಿವಾರಸಂತೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ರಾಜೇಶ್.ಕೆ, ಹೆಚ್.ಸಿ.ಗೋವಿಂದರಾಜು, ಚಂದ್ರ.ಹೆಚ್.ವೈ ಹಾಗೂ ಠಾಣೆಯ ಅಪರಾಧ ಪತ್ತೆ ದಳದ ಸಿಬ್ಬಂದಿಗಳು, ತಾಂತ್ರಿಕ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಬಂಧಿತನಿಂದ ನಗದು ರೂ.30,777, ಕೃತ್ಯಕ್ಕೆ ಬಳಸಿದ್ದ ದ್ವಿ-ಚಕ್ರ ವಾಹನ ಮತ್ತು ಕಬ್ಬಿಣದ ರಾಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಹಾಸನ, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದೆ.

ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡು ತನ್ನ ಚಾಳಿಯನ್ನು ಮುಂದುವರಿಸಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ದಕ್ಷತೆ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News