ಕುಶಾಲನಗರ | ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪ : ಇಬ್ಬರ ಬಂಧನ

Update: 2024-12-12 14:38 GMT

ಬಂಧಿತ ಆರೋಪಿಗಳು

ಮಡಿಕೇರಿ : ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್‌ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್‌ ಶೀಟ್ ಮಾರಾಟಗಾರರಾದ ಮುಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿಂದ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‍ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ ತಂತ್ರಾಶದ ಮೂಲಕವೂ ತಿಳಿಸಬಹುದಾಗಿದ್ದು, ಮಾದಕ ವಸ್ತು ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್‍ಪಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News