ಕುಶಾಲನಗರ | ಟಿಪ್ಪರ್-ಬೈಕ್ ನಡುವೆ ಢಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ
Update: 2025-04-17 16:52 IST

ಕುಶಾಲನಗರ: ಟಿಪ್ಪರ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ ಹಿಂಬದಿ ಕುಳಿತ್ತಿದ್ದ ಮಡಿಕೇರಿ ತಾಲ್ಲೂಕಿನ ಸಾಮ್ವೆಲ್ (22) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಸವಾರ ನವೀನ(23) ನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ಬೈಲುಕುಪ್ಪೆ ಕಡೆಯಿಂದ ಕೊಪ್ಪ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಕೊಪ್ಪ ಆರೋಗ್ಯ ಕೇಂದ್ರದ ಸಮೀಪ ಈ ದುರ್ಘಟನೆ ನಡೆದಿದೆ.
ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.