ಮಡಿಕೇರಿ | ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Update: 2024-05-03 16:04 GMT

ಸಾಂದರ್ಭಿಕ ಚಿತ್ರ (PTI)

ಮಡಿಕೇರಿ: ಅಸ್ಸಾಂ ಮೂಲದ ತೋಟ ಕಾರ್ಮಿಕನೊಬ್ಬ ಸಿಡಿಲು ಬಡಿದು ಮೃತಪಟ್ಟ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಅಸ್ಸಾಂ ಮೂಲದ ಪ್ರಮಾತ್ ಗರ್ಮಾನಿ(37) ಮೃತ ಕಾರ್ಮಿಕನಾಗಿದ್ದಾನೆ. ಬೆಟ್ಟಗೇರಿ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದ ಕಾರ್ಮಿಕ ಶುಕ್ರವಾರ ಸಂಜೆ ಮಳೆ ಸುರಿಯುವ ಸಂದರ್ಭ ಮನೆಯಿಂದ ಹೊರ ಬಂದಿದ್ದ ಎನ್ನಲಾಗಿದೆ. ಈ ವೇಳೆ ಸಿಡಿಲು ಬಡಿದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ತಕ್ಷಣವೇ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂಧು ತಿಳಿದು ಬಂದಿದೆ.

ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News