ಬಿಜೆಪಿಗರು ಸಾವಿನ ಮನೆಯಲ್ಲಿ ರಾಜಕೀಯ ‌ಮಾಡುವುದನ್ನು ನಿಲ್ಲಿಸಿ ಜನಪರ ಕಾಳಜಿ ತೋರಲಿ: ಆರ್.ಕೆ ಅಬ್ದುಲ್ ಸಲಾಂ

Update: 2025-04-05 14:32 IST
ಬಿಜೆಪಿಗರು ಸಾವಿನ ಮನೆಯಲ್ಲಿ ರಾಜಕೀಯ ‌ಮಾಡುವುದನ್ನು ನಿಲ್ಲಿಸಿ ಜನಪರ ಕಾಳಜಿ ತೋರಲಿ: ಆರ್.ಕೆ ಅಬ್ದುಲ್ ಸಲಾಂ
  • whatsapp icon

ಮಡಿಕೇರಿ: ಬಿಜೆಪಿ ಕಾರ್ಯಕರ್ತನ ಸಾವಿನ ಪ್ರಕರಣದಲ್ಲಿ ಕೊಡಗಿನ ಶಾಸಕಾರದ ಎ.ಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ವಿರುದ್ಧ ರಾಜ್ಯ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಮುಖಂಡರುಗಳು ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದು ವಿರಾಜಪೇಟೆ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಕೆ ಅಬ್ದುಲ್ ಸಲಾಂ ಹೇಳಿದ್ದಾರೆ.

ಕೊಡಗು ಜಿಲ್ಲೆಯ ಕಾಂಗ್ರೆಸ್ ಶಾಸಕದ್ವಯರಾದ ಎ.ಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ಅವರು ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ, ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಕೊಡಗಿನ ಶಾಸಕರು ಮಾದರಿ ಶಾಸಕರು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಪ್ರತಿ ನಿತ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾ, ಕೊಡಗು ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಶಾಸಕರ ಅಭಿವೃದ್ಧಿ ಕೆಲಸಗಳನ್ನು ಸಹಿಸದೆ, ಬಿಜೆಪಿಗರು ಈ ಹಿಂದೆ ಕೂಡ ಎ.ಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ಅವರ ವಿರುದ್ಧ ಇಲ್ಲಸಲ್ಲದ ವಿಷಯಗಳನ್ನು ಹಬ್ಬಿಸುತ್ತಾ ರಾಜಕೀಯ ‌ಮಾಡುತ್ತಾ ಬಂದಿದ್ದಾರೆ.  

ಜಿಲ್ಲೆಯ ಶಾಸಕರು ಜಾತಿ, ಧರ್ಮ ಮತ್ತು ಪಕ್ಷ ಬೇಧ ಮರೆತು ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇದನ್ನು ಸಹಿಸದೆ ಬಿಜೆಪಿಗರು ರಾಜಕೀಯ ಲಾಭಕ್ಕೋಸ್ಕರ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ. ಕಾಂಗ್ರೆಸ್ ಶಾಸಕರಿಗೆ ಪರಿಚಯವೇ ಇಲ್ಲದ ವ್ಯಕ್ತಿಯ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕರೇ ನೇರ ಹೊಣೆ ಎಂದು ಆರೋಪಿಸುವ ಬಿಜೆಪಿಗರು ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ.

ವಿನಯ್ ಅವರು ಆತ್ಮಹತ್ಯೆ ಮಾಡಿದ್ದು ನೋವಿನ ಸಂಗತಿ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ದೇವರು ಕೊಡಲಿ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವನ್ನು ಸಹಿಸದೆ, ಕ್ಷುಲ್ಲಕ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗರು, ತಮ್ಮನ್ನು ತಾವು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಹೆಣದ ಮೇಲೆ ರಾಜಕೀಯ ಮಾಡುವುದನ್ನು ನಿಲ್ಲಿಸಿ,ಕೊಡಗಿನ ಅಭಿವೃದ್ಧಿ ವಿಷಯದಲ್ಲಿ ಚರ್ಚೆಗೆ ಬರಲಿ. ಜಿಲ್ಲೆಯಲ್ಲಿ ಕಳೆದ 25 ವರ್ಷಗಳಲ್ಲಿ ಬಿಜೆಪಿ ಶಾಸಕರು ಏನು ಮಾಡಿದ್ದಾರೆ ಎಂದು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ.

ವಿನಯ್ ಆತ್ಮಹತ್ಯೆಗೂ ಕಾಂಗ್ರೆಸ್ ಶಾಸಕರಿಗೂ ಹಾಗೂ ಕಾಂಗ್ರೆಸ್ ಮುಖಂಡರಿಗೆ ಯಾವುದೇ ರೀತಿಯ ಸಂಬಂಧವಿಲ್ಲ. ವಿನಯ್ ಆತ್ಮಹತ್ಯೆಯ ಬಗ್ಗೆ ಸೂಕ್ತ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ. ಆಗ ಬಿಜೆಪಿಗರ ನೈಜ ಮುಖವಾಡ ಬಯಲಾಗಲಿದೆ. ಸಾವಿನ ಮನೆಯಲ್ಲಿಯೂ ಕೂಡ ರಾಜಕೀಯ ‌ಮಾಡುವುದನ್ನು ನಿಲ್ಲಿಸಿ ಬಿಜೆಪಿಗರು,ಜನಪರವಾದ ಕಾಳಜಿ ತೋರಲಿ. ಕೊಡಗಿನ ಶಾಸಕರಾದ ಎ.ಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ಅವರ ವಿರುದ್ಧ ಅಪಪ್ರಚಾರ ನಡೆಸಿ,ಶಾಸಕರ ಹೆಸರಿಗೆ ಕಳಂಕ ತರುವ ಬಿಜೆಪಿಗೆ ಕೊಡಗಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆರ್.ಕೆ ಅಬ್ದುಲ್ ಸಲಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News