ಮಡಿಕೇರಿ | ಬ್ಯಾಂಕ್‌ನಲ್ಲೇ ವ್ಯವಸ್ಥಾಪಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Update: 2024-09-12 11:14 GMT

 ವಿಜು(46)

ಮಡಿಕೇರಿ : ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ.

ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮೂಲತಃ ಕೇರಳದ ಆಲಪುಝ್ಝ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೊಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News