ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ದುರಂತ : ಕೊಡಗಿನ ಯೋಧ ಚಿಂತಾಜನಕ

Update: 2024-12-28 06:25 GMT

ಮಡಿಕೇರಿ : ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್ -ಜಯಾ ದಂಪತಿ ಪುತ್ರ ದಿವಿನ್ (28) ಗಾಯಗೊಂಡಿರುವ ಯೋಧ.

ದಿವಿನ್ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ‌

ಈ ಬಗ್ಗೆ ಭಾರತೀಯ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ದಿವಿನ್ ತಾಯಿ ಜಯಾ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದರು. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News