ಮಡಿಕೇರಿ: ಬಾಲಕಿಯನ್ನು ಹತ್ಯೆಗೈದು ರುಂಡದೊಂದಿಗೆ ಆರೋಪಿ ಪರಾರಿ

Update: 2024-05-10 05:40 GMT

ಆರೋಪಿ ಪ್ರಕಾಶ್

ಮಡಿಕೇರಿ: ಬಾಲಕಿಯೊಬ್ಬಳನ್ನು ಹತ್ಯೆಗೈದು ರುಂಡದೊಂದಿಗೆ ಆರೋಪಿ ಪರಾರಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಮುಟ್ಲು ಗ್ರಾಮದಲ್ಲಿ ಗುರುವಾರ ನಡೆದಿರುವಬಗ್ಗೆ ವರದಿಯಾಗಿದೆ.

ಆರೋಪಿಯನ್ನು  ಪ್ರಕಾಶ್ (32) ಎಂದು ಗುರುತಿಸಲಾಗಿದೆ. ಸೂರ್ಲಬ್ಬಿ ಪ್ರೌಢ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದ ಮೀನಾ (16) ಹತ್ಯೆಗೀಡಾದ ಬಾಲಕಿ.

ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಸಂತೋಷದ ನಡುವೆಯೇ ಮನೆಯವರು ಈಕೆಯ ವಿವಾಹಕ್ಕೆಂದು ಅದೇ ಗ್ರಾಮದ ಪ್ರಕಾಶ್ ನೊಂದಿಗೆ ನಿಶ್ಚಿತಾರ್ಥ ಮಾಡಲು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ 18 ವರ್ಷದ ನಂತರ ವಿವಾಹ ಮಾಡುವಂತೆ ಕಾನೂನಿನ ಅರಿವು ಮೂಡಿಸಿದ್ದರು. ನಂತರ ಎರಡೂ ಮನೆಯವರು ಮೀನಾಳಿಗೆ 18 ವರ್ಷ ತುಂಬಿದ ಮೇಲೆ ವಿವಾಹ ಮಾಡಲು ನಿಶ್ಚಿಯಿಸಿದರು. ಇದರಿಂದ ಕುಪಿತಗೊಂಡ ಪ್ರಕಾಶ್ ಸಂಜೆ ವೇಳೆಗೆ ಮೀನಾಳ ಮನೆಗೆ ಬಂದು ಆಕೆಯ ತಂದೆ, ತಾಯಿ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾನೆ ಎಂದು ಕೊಡಗು ಎಸ್‌ಪಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ ತಲೆ ಮರೆಸಿಕೊಂಡಿದ್ದು,  ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶೀಘ್ರದಲ್ಲೇ  ಆರೋಪಿಯನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 

 

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News