ಮಡಿಕೇರಿ | ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನೀರುಪಾಲು

Update: 2024-04-26 17:47 GMT
ಮಡಿಕೇರಿ | ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನೀರುಪಾಲು
  • whatsapp icon

ಮಡಿಕೇರಿ : ಸ್ನಾನಕ್ಕೆಂದು ನದಿಗಿಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ನೂರಿನಲ್ಲಿ ನಡೆದಿದೆ.

ಸುಂಟಿಕೊಪ್ಪ ಮತ್ತಿಕಾಡು ಯುವಕ ನಿಶಾಂತ್ (24) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಐವರು ಸ್ನೇಹಿತರು ಸ್ನಾನಕ್ಕೆಂದು ನದಿಗಿಳಿದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತದೇಹದ ಶೋಧ ಕಾರ್ಯ ಸಂಜೆಯವರೆಗೆ ಮುಂದುವರೆದಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News