ಪರಿಷತ್ ಚುನಾವಣೆ | ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಕುಮಾರ್ ನಾಮಪತ್ರ ಸಲ್ಲಿಕೆ
Update: 2024-05-16 16:54 GMT
ಮಡಿಕೇರಿ : ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3 ರಂದು ಜರುಗಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ.ಮಂಜುನಾಥ್ ಕುಮಾರ್ ಗುರುವಾರ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಶಿಕ್ಷಣ ಸಚಿವ ಮಧುಬಂಗಾರಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಹೊನ್ನಾಳಿ ಶಾಸಕ ಶಾಂತನಗೌಡ, ಎಂಎಲ್‍ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್‍ಸಿ ಪ್ರಸನ್ನಕುಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಕುಮಾರ್, ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಬವಣೆಗಳನ್ನು ಬಗೆಹರಿಸಬೇಕಿದೆ. ಕಳೆದ ಅವಧಿಗಳಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ ಹಿತ ಕಾಯದೇ ಸ್ವಹಿತ ಮೆರೆದಿದ್ದು, ಈ ಬಾರಿ ಕ್ಷೇತ್ರದ ಶಿಕ್ಷಕರು ನನ್ನನ್ನು ಚುನಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.