ಹುದ್ದೆ ಖಾಯಂಗೊಳಿಸಲು ಒತ್ತಾಯಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
Update: 2023-11-24 12:36 GMT
ಮಡಿಕೇರಿ: ಹುದ್ದೆ ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಮತ್ತು ಸಾಮಾಜಿಕ ಭದ್ರತೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರ ಅತಿಥಿ ಉಪನ್ಯಾಸಕರುಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇವರುಗಳ ಜೀವನ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತಂತ್ರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಘದ ಪ್ರಮುಖರಾದ ಶಾಂತಕುಮಾರ್, ಚಂದ್ರ, ಡೀನಾ, ಕಾವ್ಯ, ವಿದ್ಯಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.