ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ

Update: 2024-05-29 13:47 GMT

ಕಾಡಾನೆಯ ಕಳೇಬರ

ಸುಂಟಿಕೊಪ್ಪ: ಆಹಾರ ಅರಸಿ ಕಾಫಿತೋಟಕ್ಕೆ ಬಂದಿದ್ದ ಕಾಡಾನೆಯೊಂದರ ಕಳೇಬರ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ತೋಟದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಬುಧವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಯಿಸಿ, ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಯಿತು. ಅಲ್ಲದೆ, ಮೃತಪಟ್ಟಿರುವ ಕಾಡಾನೆಯು 16ರಿಂದ 20ವರ್ಷ ಪ್ರಾಯದ ಗಂಡಾನೆಯಾಗಿದೆ ಎಂದು ಹೇಳಲಾಗಿದೆ. ವಿದ್ಯುತ್ ಕಂಬಕ್ಕೆ ಮೈ ಉಜ್ಜಿದ ಸಂದರ್ಭ ಕಂಬ ಮುರಿದು ಬಿದ್ದು ವಿದ್ಯುತ್ ಪ್ರವಹಿಸಿ ಕಾಡಾನೆ ಸ್ಥಳಲ್ಲೇ ಪ್ರಾಣ ಬಿಟ್ಟಿದೆ ಎನ್ನಲಾಗಿದೆ. 

ಸ್ಥಳಕ್ಕೆ ಅರಣ್ಯ ಉಪಸಂರಕ್ಷಣಾಧಿಕಾರಿ ಡಿ.ಎಸ್.ಬಾಸ್ಕರ್, ಎಸಿಎಪ್,ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಅರಣ್ಯ ಕ್ಷೀಪ್ರ ಕಾರ್ಯಚರಣೆ ಪಡೆಯ ದೇವಯ್ಯ ಹಾಗೂ ಸಿಬ್ಬಂದಿಗಳು ಆಗಮಿಸಿದ್ದರು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News