ವಿರಾಜಪೇಟೆ | ಕಾಡುಕೋಣ ದಾಳಿ : ಇಬ್ಬರಿಗೆ ಗಾಯ

Update: 2024-12-18 13:16 GMT

ಮಡಿಕೇರಿ : ಕಾಡುಕೋಣ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆ ತಾಲೂಕಿನ ಚೆನ್ನಯ್ಯಕೋಟೆ ಗ್ರಾಮದ ಆಬ್ಬೂರು ಎಂಬಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ರಾಜು.ಜೆ (52) ಹಾಗೂ ಬೋಜಿ ಜೆ.ಟಿ (48) ಗಾಯಗೊಂಡವರು.

ಎಂದಿನಂತೆ ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಜಿ ಹಾಗೂ ರಾಜು ಮೇಲೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಪಾಲಿಬೆಟ್ಟ ಸರಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಚೆನ್ನವೀರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News