ವಿರಾಜಪೇಟೆ | ಬಾವಿಗೆ ಬಿದ್ದು ಕಾಡಾನೆ ಸಾವು

Update: 2024-06-18 06:55 GMT

ಬಾವಿಗೆ ಬಿದ್ದ ಕಾಡಾನೆ

ವಿರಾಜಪೇಟೆ : ಕಾಡಾನೆಯೊಂದು ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾ.ಪಂ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಬಾವಿಯನ್ನು ನಿರ್ಮಿಸಲಾಗುತ್ತಿತ್ತು. ಸುಮಾರು 20 ಅಡಿಗಳಷ್ಟು ಆಳವಿದ್ದ ಬಾವಿಗೆ ಸೋಮವಾರ ಮಧ್ಯರಾತ್ರಿ ಕಾಡಾನೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಯ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರನ್ನು ಹುಡುಕುತ್ತಾ ಕಾಡಾನೆಗಳು ಕೊಡಗಿನ ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಕೃಷಿಕ ವರ್ಗ ಅಪಾರ ನಷ್ಟವನ್ನು ಅನುಭವಿಸುತ್ತಿದೆ, ಅಲ್ಲದೆ ಕಾಡಾನೆಗಳು ಅಸಹಜ ಸಾವಿಗೂ ತುತ್ತಾಗುತ್ತಿವೆ. ಕಾಡಾನೆಗಳ ಉಪಟಳ ಮಿತಿ ಮೀರುತ್ತಿದ್ದು, ಗ್ರಾಮಗಳಲ್ಲಿ ಆತಂಕದ ವಾತಾವರಣ ಮೂಡಿದೆ. 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News