ಕೊಡಗು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

Update: 2025-02-13 20:25 IST
ಕೊಡಗು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಸಾಂದರ್ಭಿಕ ಚಿತ್ರ 

  • whatsapp icon

ಮಡಿಕೇರಿ : ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ. ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ.

ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ(52) ಎಂಬವರು ಮೃತಪಟ್ಟವರು. ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News