ಫೆಂಗಲ್ ಚಂಡಮಾರುತ | ಡಿ.3ರಂದು ಶಾಲಾ-ಕಾಲೇಜುಗಳಿಗೆ ರಜೆ : ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ
Update: 2024-12-02 13:16 GMT
ಕೋಲಾರ : ಫೆಂಗಲ್ ಚಂಡಮಾರುತ ಹಿನ್ನಲೆ ಕೋಲಾರ ಜಿಲ್ಲಾದ್ಯಂತ ವ್ಯಾಪಕ ಮಳೆ ಹಾಗೂ ಚಳಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ 1ನೇ ತರಗತಿಯಿಂದ 10ನೇ ತರಗತಿ ಶಾಲೆಗಳು ಹಾಗೂ ಕಾಲೇಜುಗಳಿಗೆ ಡಿ.03ರಂದು ರಜೆ ಘೋಷಿಸಿ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ.