ಬಂಗಾರಪೇಟೆ | ಕಾಡಾನೆಗೆ ದಾಳಿಗೆ ಮಹಿಳೆ ಬಲಿ

Update: 2025-02-25 10:27 IST
ಬಂಗಾರಪೇಟೆ | ಕಾಡಾನೆಗೆ ದಾಳಿಗೆ ಮಹಿಳೆ ಬಲಿ
  • whatsapp icon

ಬಂಗಾರಪೇಟೆ: ಒಂಟಿ ಕಾಡಾನೆ ದಾಳಿಗೆ ರೈತ ಮಹಿಳೆಯೊಬ್ಬರು ಬಲಿಯಾದ ಘಟನೆ ತಾಲೂಕಿನ ಸಾಕರಸನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಮಂಜುಳಾ(44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆ. ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿ ಘಟನೆ ನಡೆದಿದೆ. ಮಂಜುಳಾ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಮನೆಯಿಂದ ಹೊರಹೋದ ವೇಳೆ ಕಾಡಾನೆ ದಾಳಿ ನಡೆಸಿದೆ ಕೊಂದು ಹಾಕಿದೆ ಎನ್ನಲಾಗಿದೆ.

ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಶಾಸಕರ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಆನೆ ದಾಳಿ ತಡೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News