ಕೋಲಾರ| ಎಪಿಎಂಸಿ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; ಸಾವಿರಾರು ಟೊಮೆಟೊ ಬಾಕ್ಸ್‌ಗಳು ಬೆಂಕಿಗಾಹುತಿ

Update: 2024-09-22 15:18 GMT

ಕೋಲಾರ: ನಗರ ಹೊರವಲಯದ ಎಪಿಎಂಸಿ ಮಾರುಕಟ್ಟೆಯಲ್ಲಿ ರವಿವಾರ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸಾವಿರಾರು ಟೊಮೆಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ. ಸೋಮಣ್ಣ ಎಂಬವರಿಗೆ ಸೇರಿದ ಮಂಡಿ ಇದಾಗಿದೆ. 

ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಗಿದೆ. ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆ ವೇಳೆಗೆ ಸುಮಾರು ಒಂದು ಸಾವಿರಕ್ಕೂ ಅಧಿಕ ಟೊಮೆಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಬಗ್ಗೆ ತಿಳಿದುಬಂದಿದೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News