ಕೋಲಾರ | ಬೊಲೆರೋ ವಾಹನ ಢಿಕ್ಕಿ : ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಐವರು ಮೃತ್ಯು
Update: 2024-12-18 13:22 GMT
ಕೋಲಾರ : ಬೊಲೆರೋ ವಾಹನವೊಂದು ಮೂರು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಬುಧವಾರ ಸಂಭವಿಸಿದೆ.
ಘಟನೆಯಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.