ಕೋಲಾರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಹಲವರು ಪೊಲೀಸ್ ವಶಕ್ಕೆ

Update: 2024-02-28 09:58 GMT

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಕೋಲಾರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪಾಕಿಸ್ತಾನ ಏಜೆಂಟ್, ದೇಶದ್ರೋಹಿ ನಾಸಿರ್ ಹುಸೇನ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ನಾಸಿರ್ ಅವರ ಭಾವಚಿತ್ರವನ್ನು ಚಪ್ಪಲಿಯಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದರು.

ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು ಎಂದು ತಿಳಿದು ಬಂದಿದೆ

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ನಲ್ಲಿ ಕರೆದೊಯ್ದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News