ಕೋಲಾರ | ಎರಡು ಬಸ್ ಗಳ ಮಧ್ಯೆ ಢಿಕ್ಕಿ; ಓರ್ವ ಮೃತ್ಯು, 15ಕ್ಕೂ ಹೆಚ್ಚು ಮಂದಿಗೆ ಗಾಯ
Update: 2025-03-12 09:33 IST

ಕೋಲಾರ : ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪ ನಡೆದಿದೆ.
ಆಂಧ್ರದ ಮದನಪಲ್ಲಿಯ ಗಂಗಾಧರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗಾಯಳುಗಳನ್ನು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.