ಕೋಲಾರ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ; ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Update: 2024-04-14 09:32 GMT

ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟಿಸುತ್ತಿರುವ ಗ್ರಾಮಸ್ಥರು

ಕೋಲಾರ:  ರೈತರೊಬ್ಬರು ಆನೆ ದಾಳಿಗೊಳಗಾಗಿ ಮೃತಪಟ್ಟಿರುವ ಘಟನೆ  ರವಿವಾರ ಮುಂಜಾನೆ ಬಂಗಾರಪೇಟೆ  ಕಾಮಸಮುದ್ರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ರೈತನನ್ನು ಕೋಲಾರ ಜಿಲ್ಲೆ ಪೋಲೇನಹಳ್ಳಿ ನಿವಾಸಿ ನಾರಾಯಣಪ್ಪ (45) ಎಂದು ಗುರುತಿಸಲಾಗಿದೆ. ತರಕಾರಿ ತರಲು ಕಾಮಸಮುದ್ರಂ ಗ್ರಾಮದ ಕಡೆ ನಡೆದುಕೊಂಡು ಬರುವಾಗ ಮಾರ್ಗದ ಮಧ್ಯೆ ಆನೆ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದು ಒಂದು ವಾರದಲ್ಲಿ ನಡೆದ ಎರಡನೇ ಪ್ರಕರಣವಾಗಿದೆ. ಈ ಹಿಂದೆ ತಮಿಳುನಾಡಿನ ಮೂಲದ ವ್ಯಕ್ತಿ ದೇವಸ್ಥಾನಕ್ಕೆ ಬಂದಿದ್ದಾಗ ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ್ದರು.

ಕಾಡಾನೆಗಳನ್ನು ನಿಯಂತ್ರಿಸುವಲ್ಲಿ ಅರಣ್ಯಾಧಿಕಾರಿಗಳ ವೈಫಲ್ಯದಿಂದ ಕಾಡಾನೆಗಳ ದಾಳಿಗೆ ಒಂದರ ಹಿಂದೆ ಒಂದರಂತೆ  ಸಾವುಗಳು ನಡೆಯುತ್ತಿವೆ ಎಂದು  ಗ್ರಾಮಸ್ಥರು ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವ ವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಅರಣ್ಯ ಅಧಿಕಾರಿ ಶ್ರೀಲಕ್ಷ್ಮಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News