ಕೋಲಾರ | ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

Update: 2025-04-13 14:58 IST
ಕೋಲಾರ | ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ
  • whatsapp icon

ಕೋಲಾರ : ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ರೈತರೊಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯಲ್ಲಿ ಜರುಗಿದೆ.

ರವಿವಾರ ಬೆಳಿಗ್ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮ‌ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅಧಿಕಾರಿಗಳು ಮುಂದಾದಾಗ ಈ ಘಟನೆ ನಡೆದಿದೆ.

ರೈತರು ಅರಣ್ಯ ಭೂಮಿ ಒತ್ತುವರಿಗೆ ಪ್ರಯತ್ನ ಮಾಡಿದ್ದಾರೆಂಬ ಆರೋಪಿಸಿ ಇಬ್ಬರು ರೈತರನ್ನು ಹಾಗೂ 10 ಟ್ರಾಕ್ಟರ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಟ್ರಾಕ್ಟರ್ ಮತ್ತು ರೈತರ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಮನವೊಲಿಸಲು ಪೊಲೀಸರಿಂದ ಪ್ರಯತ್ನ ಮುಂದುವರಿದಿದೆ.

 ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News