ಕೋಲಾರ | ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಬ್ಲಾಸ್ಟಿಂಗ್ ವೇಳೆ ಅವಘಡ: ಓರ್ವ ಮೃತ್ಯು, ಮೂವರಿಗೆ ಗಾಯ
Update: 2025-03-17 13:47 IST

ಕೋಲಾರ: ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಬ್ಲಾಸ್ಟಿಂಗ್ ವೇಳೆ ಕಲ್ಲು ಬಿದ್ದು ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯವಾಗೊಂಡಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಟೇಕಲ್ ಹೋಬಳಿಯ ಮಾಕಾರಹಳ್ಳಿ ಬಳಿ ಘಟನೆ ನಡೆದಿದೆ.
ಹರೀಶ್ ಗೌಡ ಎಂಬವರು ನಡೆಸುತ್ತಿದ್ದ ಕ್ರಷರ್ ಕಲ್ಲು ಗಣಿಗಾರಿಕೆಯಲ್ಲಿ ಆಂಧ್ರ ಮೂಲದ ಕಾರ್ಮಿಕ ವೆಂಕಟೇಶ್ (60) ಸಾವನ್ನಪ್ಪಿದ್ದಾರೆ. ಅಲ್ಲದೆ, ಹರೀಶ್ ಮತ್ತು ಈಶ್ಚರ್ ಎಂಬವರಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.