ಕೊಪ್ಪಳ | ಬೈಕ್ ಗೆ ಬಸ್ ಢಿಕ್ಕಿ: 8 ವರ್ಷದ ಬಾಲಕಿ ಮೃತ್ಯು
Update: 2024-12-23 18:41 GMT
ಕೊಪ್ಪಳ: ಬೈಕ್ ಗೆ ಸಾರಿಗೆ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಯಲಬುರ್ಗಾ ತಾಲೂಕು ಪಂಚಾಯತಿ ಹತ್ತಿರ ಸೋಮವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಇಲ್ಲಿನ ಜನತಾ ಕಾಲೋನಿಯ ನಿವಾಸಿ ಸಾನ್ವಿ (8) ಮೃತ ಬಾಲಕಿ ಎಂದು ತಿಳಿದುಬಂದಿದೆ.
ಸಂಬಂಧಿ ಜೊತೆಗೆ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಸಾರಿಗೆ ಬಸ್ ಢಿಕ್ಕಿ ಹೊಡೆದು ಬಸ್ ಟೈಯರ್ ಗೆ ಸಿಲುಕಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಯಲಬುರ್ಗಾ ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.