ಗಂಗಾವತಿ | ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

Update: 2024-09-23 08:48 GMT

ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

ಕೊಪ್ಪಳ/ಗಂಗಾವತಿ : ಅಂಗನವಾಡಿಯ ಮೇಲ್ಚಾವಣಿ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಮೈಬೂಬ್ ಕಾಲೋನಿಯಲ್ಲಿ ನಡೆದಿದೆ.

ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು ಕೇವಲ 7 ವರ್ಷಗಳಾಗಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News