ಗಂಗಾವತಿ | ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ: ಆರು ಮಂದಿ ಆರೋಪಿಗಳ ಸೆರೆ

Update: 2024-02-12 12:48 GMT

ಗಂಗಾವತಿ: ನಗರದಲ್ಲಿ ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಗಂಗಾವತಿ ನಿವಾಸಿ 21 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವಾಗಿದೆ ಎನ್ನಲಾಗಿದೆ. ಗಂಗಾವತಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಪತಿ-ಪತ್ನಿ ಜಗಳವಾಡುತ್ತಿದ್ದರು. ಈ ವೇಳೆ ಬಸ್ ನಿಲ್ದಾಣದಲ್ಲಿ ಆರು ಮಂದಿ ಅಪರಿಚಿತರ ತಂಡ ಆಗಮಿಸಿ ಜಗಳ ಬಿಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಅಲ್ಲದೇ ಪತಿಗೆ ಬುದ್ದಿವಾದ ಹೇಳುವ ನೆಪದಲ್ಲಿ ಆತನಿಗೆ ಹಲ್ಲೆಗೈದಿದ್ದಾರೆ. ನಂತರ ಬಸ್ ನಿಲ್ದಾಣದ ಮುಂಭಾಗದ ಉದ್ಯಾನಕ್ಕೆ ಯುವತಿಯನ್ನು ಕರೆದೊಯ್ದು ತಂಡದಲ್ಲಿದ್ದ ಓರ್ವ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ದೂರಿನಲ್ಲಿ ಓರ್ವನ ವಿರುದ್ಧ ಅತ್ಯಾಚಾರ ಪ್ರಕರಣ, ಇನ್ನುಳಿದ ಐವರ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ತನಿಖೆ ನಡೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News