ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ | ಜ. 12 ರಿಂದ ಗವಿಶ್ರೀ ಕ್ರೀಡಾ ಉತ್ಸವ ಆಯೋಜನೆ: ಸಂಸದ ರಾಜಶೇಖರ ಹಿಟ್ನಾಳ್
ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ಧಿಯಾದ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಕೊಪ್ಪಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗವಿಶ್ರೀ ಕ್ರೀಡಾ ಉತ್ಸವ-2025 ಜನವರಿ 12 ರಿಂದ 18 ರವರೆಗೆ ಆಯೋಜಸಲಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ್ ಹೇಳಿದರು.
ನಗರದ ಪ್ರವಾಸಿ ಮಂದಿರ ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತ್ನಾಡಿದ ಅವರು ಈ ಕ್ರೀಡಾಕೂಟದಲ್ಲಿ 19 ರೀತಿಯ ವಿವಿಧ ಸಾಂಪ್ರದಾಯಿಕ ಹಾಗೂ ದೇಶಿಯ ಕ್ರೀಡೆಗಳು ಹಾಗೂ ಪ್ರದರ್ಶನ ಪಂದ್ಯಾವಳಿಗಳನ್ನ ಆಯೋಜಿಸಲಾಗಿದೆ. ಭಾಗವಹಿಸುವ ಪ್ರತಿಯೊಬ್ಬರಿಗೂ ಉಪಹಾರ, ಊಟದ ವ್ಯವಸ್ಥೆ ಮಾಡಿಸಲಾಗಿದೆ. ಅತ್ಯುನತ ತಂಡಗಳಿಂದ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.
ಈ ಕ್ರೀಡಾಕೂಟದ ದಲ್ಲಿ ಆಹ್ವಾನಿತ ತಂಡಗಳಿಂದ ಕ್ರಿಕೆಟ್ ಪಂದ್ಯಾವಳಿ,ಪುರುಷ ಮತ್ತು ಮಹಿಳೆಯರಿಗೆ ೧೨ ಕಿ.ಮಿ ಮ್ಯಾರಥಾನ್, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮಲ್ಲಕಂಬ ಪ್ರದರ್ಶನ,ಸಂಗ್ರಾಣೆ ಕಲ್ಲು ಎತ್ತುವ ಸ್ಪರ್ಧೆ,ಶ್ವಾನ ಪ್ರದರ್ಶನ, ಕರಾಟೆ ಪ್ರದರ್ಶನ ಮತ್ತು ಯುವಕರಿಂದ ಎತ್ತಿನ ಬಂಡಿ ಜಗ್ಗುವ ಸ್ಪರ್ಧೆ ಸೇರಿದಂತೆ ಇನ್ನು ಮುಂತಾದ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ,ಮಾಜಿ ಸಂಸದ ಕರಡಿ ಸಂಗಣ್ಣ, ಜೆಡಿಎಸ್ ಮುಖಂಡ ಸಿವಿ ಚಂದ್ರಶೇಖರ್, ಚಂದ್ರಶೇಖರ್ ಅಡೂರು, ಎಸಿ ಮಹೇಶ್ ಮಾಲಗಿತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.