ಕೊಪ್ಪಳ | ದಲಿತ ಯುವತಿಗೆ ವಿಷವುಣಿಸಿ ಕೊಲೆ ಪ್ರಕರಣ; 7 ಮಂದಿ ಪೊಲೀಸ್‌ ವಶಕ್ಕೆ

Update: 2024-09-04 08:52 GMT

ಕೊಪ್ಪಳ: ಕನಕಗಿರಿ ಠಾಣಾ ವ್ಯಾಪ್ತಿಯಲ್ಲಿ ಅಗಸ್ಟ್ 29ರಂದು  ನಡೆದ ದಲಿತ ಯುವತಿ ವಿಷ ಸೇವನೆಯಿಂದ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ, 13 ಮಂದಿಯ ಮೇಲೆ ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೆ ದಿನ ಮೃತ ಯುವತಿಯ ಗಂಡ ಹನುಮಯ್ಯ ಹಾಗೂ ಅವನ ತಂದೆ ಕಾಳಿಂಗಪ್ಪನನ್ನು ಅರೆಸ್ಟ್ ಮಾಡಲಾಗಿದೆ. ಸೋಮವಾರ ಹನುಮಯ್ಯನ ತಾಯಿ ಸೇರಿದಂತೆ ನಾಲ್ಕು ಜನರನ್ನು ವಶಕ್ಕೆ ಪಡೆದಿದ್ದು‌, ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಈ ಘಟನಗೆ ಸಂಭಂದಿಸಿದಂತೆ ಅಟ್ರಾಸಿಟಿ ಮತ್ತು 304 B ಸೆಕ್ಷನ ಅಡಿ ಪ್ರಕರಣ ದಾಖಲಿಸಲಾಗಿದ್ದು,ಮರಣೋತ್ತರ ಪರೀಕ್ಷೆ ವರದಿ ಇನ್ನಷ್ಟೇ ಬರಬೇಕಿದೆ ಎಂದು ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News