ಕೊಪ್ಪಳ | ಹೊಸದಿಲ್ಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಿನ್ನಾಳ ಗ್ರಾಪಂ ಅಧ್ಯಕ್ಷೆಗೆ ಆಹ್ವಾನ
Update: 2025-01-18 13:39 IST

ಕೊಪ್ಪಳ: ಹೊಸದಿಲ್ಲಿಯಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ವೇತಾ ರಾಘವೇಂದ್ರ ಡಂಬಳರನ್ನು ಆಹ್ವಾನಿಸಲಾಗಿದೆ.
ದೇಶಾದ್ಯಂತ ಒಟ್ಟು 750 ಸ್ಥಳೀಯ ಆಡಳಿತದ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ಇದರಲ್ಲಿ ರಾಜ್ಯದ 12 ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು ಸೇರಿದ್ದಾರೆ.