ಕೊಪ್ಪಳ | ಕೆಎಸ್ಸಾರ್ಟಿಸಿ ಬಸ್ ಪಲ್ಟಿ ; 15ಕ್ಕೂ ಹೆಚ್ಚು ಜನರಿಗೆ ಗಾಯ
Update: 2025-03-12 10:48 IST

ಕೊಪ್ಪಳ : ಜಿಲ್ಲೆಯ ಹಟ್ಟಿ- ಹೈದರ್ ನಗರದಿಂದ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಕೊಪ್ಪಳ ತಾಲೂಕಿನ ಹೈದರ್ ನಗರ- ಹಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸರಣಿ ಅಪಘಾತಗಳು ನಡೆಯುತ್ತಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.