ಕೊಪ್ಪಳ: ವಿದ್ಯಾರ್ಥಿ ಮೃತ್ಯು ಪ್ರಕರಣ; ಆರು ಶಿಕ್ಷಕರು ಅಮಾನತು
Update: 2024-12-22 04:19 GMT
ಕೊಪ್ಪಳ: ಶೈಕ್ಷಣಿಕ ಪ್ರವಾಸದ ವೇಳೆ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸೇರಿ ಆರು ಜನ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಪ್ರಭಾರ ಮುಖ್ಯ ಶಿಕ್ಷಕ ಹನುಮೇಶ ಬೆಲ್ಲದ, ಸಹ ಶಿಕ್ಷಕರಾದ ಶಿವಕುಮಾರ ಅವಸಂಗರದ, ನಾಗರಾಜ ಶೆಟ್ಟರ್, ಅಮರೇಶ ಬಳ್ಳಾರಿ, ಈರಮ್ಮ ಬಡಿಗೇರ ಮತ್ತು ಪದ್ಮಾವತಿ ಪವಾರ ಅಮಾನತು ಗೊಂಡಿರುವ ಶಿಕ್ಷಕರು.
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ವೇಳೆ ನಿರುಪಾದಿ ಎಂಬ ವಿದ್ಯಾರ್ಥಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆಗೆ ಶಿಕ್ಷಕರ ನಿರ್ಲಕ್ಷವೇ ಕಾರಣ ಎಂದು ಅಮಾನತು ಆದೇಶದಲ್ಲಿ ಡಿಡಿಪಿಐ ಶ್ರೀಶೈಲ ಬಿರಾದಾರ ಉಲ್ಲೇಖಿಸಿದ್ದಾರೆ.