ಕೊಪ್ಪಳ | ತಾಯಿಯ ನಿಧನದ ನೋವಿನ ಮಧ್ಯೆಯೂ ಎಸೆಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ
Update: 2025-03-21 20:38 IST

ಸಾಂದರ್ಭಿಕ ಚಿತ್ರ
ಕೊಪ್ಪಳ /ಗಂಗಾವತಿ : ತಾಯಿಯ ನಿಧನದ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ ಎಸೆಸೆಲ್ಸಿ ಪರೀಕ್ಷೆ ಬರೆದ ಘಟನೆ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಅವರು ಶುಕ್ರವಾರ ಬೆಳಗ್ಗೆ ಅನಾರೋಗ್ಯ ದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ತಾಯಿಯ ಅಗಲಿಕೆಯ ಸುದ್ದಿಯ ಮಧ್ಯೆಯೂ ಧೃತಿಗೆಡದ ವಿದ್ಯಾರ್ಥಿಯು ತನ್ನ ಕುಟುಂಬದವರನ್ನು ತಾನೆ ಮನವೊಲಿಸಿ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದ ಎಂದು ತಿಳಿದುಬಂದಿದೆ.
ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವಾನ ಹೇಳಿ, ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ.