ಕೊಪ್ಪಳ | ಅಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
Update: 2025-03-17 19:52 IST

ಕೊಪ್ಪಳ/ಕನಕಗಿರಿ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಅಂಬ್ಯುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುರಾತ್ರಿ ನಡೆದಿದೆ.
ತಾಲ್ಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ ಗುತ್ತೂರು ಅವರು ಗಂಡು ಮಗುವಿಗೆ ಜನ್ಮ ನೀಡಿದವರು ಎಂದು ತಿಳಿದು ಬಂದಿದೆ.
ಹೆರಿಗೆಗಾಗಿ ತಾಲ್ಲೂಕಿನ ನವಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿತ್ತು, ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ತಾಲ್ಲೂಕು ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು 108 ಆರೋಗ್ಯ ಕವಚ ಸಿಬ್ಬಂದಿ ಧರ್ಮೇಂದ್ರ ಮರುಕುಂಬಿ ಅವರು ಚಾಲಕ ಮಾರುತಿ ವಾಲ್ಮೀಕಿ ಅವರ ಸಹಕಾರದಿಂದ ಹೆರಿಗೆ ಮಾಡಿಸಿ ತಾಯಿ ಮತ್ತು ಮಗುವಿಗೆ ಗಂಗಾವತಿ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.