ಕೊಪ್ಪಳ | ನಿಲ್ಲಿಸುವಂತೆ ಸೂಚಿಸಿದ RTO, ಭೀತಿಯಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ : 31 ವಿದ್ಯಾರ್ಥಿಗಳಿಗೆ ಗಾಯ

Update: 2024-09-03 18:27 GMT

ಕೊಪ್ಪಳ : ಕ್ರೀಡಾಕೂಟ ಮುಗಿಸಿಕೊಂಡು ಗ್ರಾಮಕ್ಕೆ ಮರಳುವಾಗ, ವಿದ್ಯಾರ್ಥಿಗಳಿದ್ದ ವಾಹನ ನಿಲ್ಲಿಸುವಂತೆ RTO ಸೂಚಿಸಿದ್ದರಿಂದ, ಭೀತಿಯಿಂದ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನವೊಂದು ಪಲ್ಟಿಯಾಗಿ, 31 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.

ತಾಲ್ಲೂಕಿನ ಗುಳದಳ್ಳಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 38 ವಿದ್ಯಾರ್ಥಿಗಳು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಆಗಮಿಸಿ, ವಾಪಾಸ್ ಗುಳದಳ್ಳಿಗೆ ಮರಳುತ್ತಿದ್ದರು ಎನ್ನಲಾಗಿದೆ.

ವಿದ್ಯಾರ್ಥಿಗಳಿದ್ದ ವಾಹನಕ್ಕೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ RTO ಅಧಿಕಾರಿ ಎದುರುಗೊಂಡಾಗ, ಈ ಘಟನೆ ನಡೆದಿದೆ ಎನ್ನಲಾಗಿದೆ. 31 ವಿದ್ಯಾರ್ಥಿಗಳ ತಲೆ, ಕೈ, ಕಾಲು ಮತ್ತು ಕುತ್ತಿಗೆ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಬಳಿಕ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News