ಕೊಪ್ಪಳ | ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ

Update: 2024-11-28 10:54 GMT

ಕೊಪ್ಪಳ : ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಬಸ್‌ ಪ್ರಗತಿನಗರದ ಹತ್ತಿರ ಕಂದಕಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ.

ಬಸ್‌ನಲ್ಲಿ ಸುಮಾರು 60 ಮಂದಿ ವಿದ್ಯಾರ್ಥಿಗಳು ಹಾಗೂ 7 ಮಂದಿ ಶಿಕ್ಷಕರು ಇದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಂತರ ಸ್ಥಳಕ್ಕೆ ಪೊಲೀಸರು ಮತ್ತು ಸಾರಿಗೆ ಇಲಾಖೆಯವರು ಆಗಮಿಸಿ ಮಕ್ಕಳಿಗೆ ಬದಲಿ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News