ಕೊಪ್ಪಳ | ಬಾಣಂತಿಯರ ಸಾವು ಪ್ರಕರಣ; ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಹಿಳಾ ಘಟಕದಿಂದ ಪ್ರತಿಭಟನೆ

Update: 2025-01-02 08:32 GMT

ಕೊಪ್ಪಳ: ರಾಜ್ಯದಲ್ಲಿ ಬಾಣಂತಿಯರು ಮತ್ತು ಶಿಶುಗಳ ಸಾವು ಹೆಚ್ಚಲು ರಾಜ್ಯ ಸರಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಗರದ ಬಸವೇಶ್ವರ ವೃತ್ತದ ಬಳಿ ಬಿಜೆಪಿ ಮಹಿಳಾ ಘಟಕದಿಂದ ಗುರುವಾರದಂದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್,ʼರಾಜ್ಯದಲ್ಲಿ ಬಾಣಂತಿಯರ ಸಾವು ಆಗಲು ಸರಕಾರದ ನಿರ್ಲಕ್ಷ್ಯವೇ ಕಾರಣ ಹೊರತು ವೈದ್ಯರ ನಿರ್ಲಕ್ಷ್ಯ ಅಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಾವಿಗಳನ್ನು ತಡೆಯಲು ಸಾಧ್ಯವಾಗಲಿಲ್ಲ. ತಾಯಿಯನ್ನು ಕಳೆದು ಕೊಂಡ ಮಕ್ಕಳಿಗೆ ಕನಿಷ್ಠ 25 ಲಕ್ಷ ರೂ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಲಗಣ್ಣನ್ವರ್, ಸೋಮಶೇಖರಗೌಡ, ರಾಜ್ಯಕಾರ್ಯಕಾರಿಣಿ ಸದಸ್ಯರು ಶ್ವಾಣಿಶ್ರೀ ಮಠದ್, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರು ರತ್ನಕುಮಾರಿ, ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷೆ ಜಯಶ್ರೀ ಗೊಂಡಬಾಳ, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷ್ಯ ಗಣೇಶ್ ಹೋರ್ಟ್ನಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News