ಕೊಪ್ಪಳ | ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಜೀವಾವಧಿ ಶಿಕ್ಷೆ ಪ್ರಕಟ
Update: 2025-04-23 17:07 IST

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 80,000 ರೂ.ಗಳ ದಂಡವನ್ನು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯವು ವಿಧಿಸಿದೆ.
ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವೆಂಕಟಾಪುರ ಗ್ರಾಮ ನಿವಾಸಿ ಆರೋಪಿ ಯಂಕಪ್ಪ ಗೊಲ್ಲರ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯವು ವಿಚಾರಣೆಯನ್ನು ನಡೆಸಿ ನ್ಯಾಯಾಲಯವು ಆರೋಪಿಯಂಕಪ್ಪ ಗೊಲ್ಲರ್ ಆರೋಪ ಸಾಭೀತಾಗಿದ್ದರಿಂದ ಆರೋಪಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 80,000 ರೂ.ಗಳ ದಂಡವನ್ನು ವಿಧಿಸುವಂತೆ ನ್ಯಾಯಾಧೀಶರಾದ ಕುಮಾರ ಡಿ.ಕೆ. ಇವರಿದ್ದ ಪೀಠ ಆದೇಶಿಸಿದೆ.