ಕೊಪ್ಪಳ | ಡೆಂಗ್ಯೂ ಜ್ವರಕ್ಕೆ 12 ವರ್ಷದ ಬಾಲಕಿ ಬಲಿ
Update: 2024-09-08 08:05 GMT
ಕೊಪ್ಪಳ : ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಬಾಲಕಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಬಾಲಕಿಯನ್ನು ಸುಫಿಯಾ (12) ಎಂದು ತಿಳಿದು ಬಂದಿದೆ. ಬಾಲಕಿಯು 6ನೇ ತರಗತಿ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿನಿಯಾಗಿದ್ದು, ಶನಿವಾರ ಶಾಲೆಗೆ ಬಂದಾಗ ಆಕೆ ಜ್ವರದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಶಿಕ್ಷಕರು ಇದನ್ನು ಗಮನಿಸಿ ಪಾಲಕರಿಗೆ ತಿಳಿಸಿದ್ದಾರೆ.
ಬಳಿಕ ಸುಫಿಯಾಳನ್ನು ಸಿಂಧನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿನ ವೈದ್ಯರು ದೇಹದಲ್ಲಿ ರಕ್ತದ ಕಣಗಳು ಕಡಿಮೆಯಾಗಿದೆ ಎಂದು ಹೇಳಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.