ಕೊಪ್ಪಳ | ಲೋಕಾಯುಕ್ತರ ದಾಳಿ ವೇಳೆ ಲಂಚದ ಹಣ ನುಂಗಿದ ಅಧಿಕಾರಿ

Update: 2024-12-21 17:14 GMT

ಕೊಪ್ಪಳ : ಎರಡು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸುವಾಗ ಅಧಿಕಾರಿ ಲಂಚದ ಹಣ ನುಂಗಿ ತಪ್ಪಿಸಿಕೊಳ್ಳಲು ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಕಚೇರಿಯಲ್ಲಿರುವ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ದಸ್ತಗಿರ್ ಅಲಿ ಬಲೆಗೆ ಬಿದ್ದ ಅಧಿಕಾರಿ. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಸಂದರ್ಭದಲ್ಲಿ ಲಂಚದ ಹಣ ನುಂಗಿದ್ದು, ವಾಂತಿ ಮಾಡಿಸಿ ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿದ್ದಾರೆ.

ಎನ್‌ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ಎರಡು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News