ಕೊಪ್ಪಳ | ಟಿಪ್ಪು ಸುಲ್ತಾನ್‌ ವಿರುದ್ಧ ಶಾಸಕ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ

Update: 2024-09-28 11:55 GMT

ಕೊಪ್ಪಳ‌ : ಟಿಪ್ಪು ಸುಲ್ತಾನ್‌ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರ ಅವಹೇಳನಾಕಾರಿ ಹೇಳಿಕೆ ಖಂಡಿಸಿ ಶಹೀದ್ ಅಸ್ಫಾಕ್ ವುಲ್ಲಾ ಕಮಿಟಿ ಮತ್ತು ನವ ಜವಾನ್ ಕಮಿಟಿಯ ನೇತೃತ್ವದಲ್ಲಿ ನಗರದ ಅಶೋಕ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಶಾಸಕ ಯತ್ನಾಳ್‌ ಅವರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಒಂದು ಸಮುದಾಯದವರ ವಿರುದ್ದವಾಗಿ ಮಾತನಾಡುವ ಮೂಲಕ ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಭಾವೈಕ್ಯತೆಗೆ ಧಕ್ಕೆಯಾಗುವ ರೀತಿಯಾಗಿ ಪ್ರಚೋದನಾಕಾರಿ ಭಾಷಣ ಮಾಡಿ, ಸಮಾಜದ ಹಲವರ ಭಾವನೆಗಳಿಗೆ ಧಕ್ಕೆ ತರುತ್ತಿರುತಿದ್ದಾರೆ. ಆದ್ದರಿಂದ ಕೂಡಲೇ ಅವರ ಶಾಸಕ ಸ್ಥಾನವನ್ನು ರದ್ದು ಪಡಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಸೀರ್ ಹುಸೇನಿ, ಅಲೀಂ ಖಾದ್ರಿ, ಆಫೀಸ್ ಅಲಿ ಮೌಲನಾ ಸೇರಿ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News