ರಾಜ್ಯಪಾಲರ ಕಚೇರಿಯಿಂದಲೇ ಪತ್ರಗಳು ಸೋರಿಕೆಯಾಗಿರಬಹುದು: ಸಿದ್ದರಾಮಯ್ಯ

Update: 2024-09-22 10:40 GMT

ಕೊಪ್ಪಳ: ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ರಾಜ್ಯಪಾಲರ ಕಛೇರಿಯಿಂದಲೇ ಸೋರಿಕೆಯಾಗಿರಬಹುದು. ಈ ಬಗ್ಗೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಕೊಪ್ಪಳದ ಗಿಣಿಗೇರಾ ಏರ್ ಸ್ಟ್ರಿಪ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಆರ್ಕಾವತಿ ಬಡಾವಣೆ ವಿಚಾರದಲ್ಲಿ ರಿಡೂ ಅಂತ ಹೇಳಿದ್ದು ನಾನಲ್ಲ, ಸುಪ್ರೀಂ ಕೋರ್ಟ್ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ

ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಸ್ಟ್ ಗೇಟ್ ಗಳ ಕಾಲಕಾಲಕ್ಕೆ ದುರಸ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು 50 ವರ್ಷಕ್ಕೆ ಗೇಟ್ ಗಳನ್ನು ಬದಲಿಸಬೇಕು. 70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ ರಚನೆಯಾಗಿದ್ದು ವರದಿ ನೀಡಬೇಕಿದೆ ಎಂದರು.

ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಷಯಗಳ ಬಗ್ಗೆ ತೀರ್ಮಾನ

ಕೊಪ್ಪಳ ಜಿಲ್ಲೆಯ ನಗರಸಭೆಯಲ್ಲಿ 8.5 ಕೋಟಿ ಬಾಕಿ ಕಾಮಗಾರಿಗಳ ಬಗ್ಗೆ ಮಾತನಾಡಿದ  ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳಲ್ಲಿ 46 ವಿಷಯಗಳು ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿತ್ತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

ಮಾಗಡಿಯಲ್ಲಿ ಬಹಳ ಶಾಸಕರು, ರೈತರು ಹಸು ಸಾಕಣೆಯ ವೆಚ್ಚ ಹೆಚ್ಚಾಗಿದ್ದು ಹಾಲಿನ ದರ ಹೆಚ್ಚಳ ಮಾಡಲು ಒತ್ತಾಯ ಮಾಡಿದರು. ಒಂದು ವೇಳೆ ಹಾಲಿನ ದರ ಹೆಚ್ಚಿಸುವ ಬಗ್ಗೆ ತೀರ್ಮಾನವಾದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ಕೊಡಬೇಕೆಂದು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಹಾಲಿನ ದರ ಹೆಚ್ಚು ಮಾಡಿದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಬೇಕೆಂದು ಸೂಚಿಸಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News