ಜಾರ್ಖಂಡ್ ಸಿಎಂ ಚಂಪೈ ಸೊರೇನ್ ರಾಜೀನಾಮೆ

Update: 2024-07-03 14:07 GMT

ಚಂಪೈ ಸೊರೇನ್ |  PC ; PTI 

ಹೊಸದಿಲ್ಲಿ : ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಲ್ಲಿ ಹೇಮಂತ್ ಸೊರೇನ್ ಜೈಲು ಸೇರಿದ್ದ ಬಳಿಕ ಚಂಪೈ ಸೊರೇನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 152 ದಿನಗಳ ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News